ದಸರಾ ಮೆರವಣಿಗೆಯಲ್ಲಿ 42 ಸ್ತಬ್ಧಚಿತ್ರಗಳು

ಮೈಸೂರು ದಸರಾ 2017ರ ಜಂಬೂಸವಾರಿ ಮೆರವಣಿಗೆಯಲ್ಲಿ 42 ಸ್ತಬ್ಧ ಚಿತ್ರಗಳು ಭಾಗವಹಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವಶಂಕರ್ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸ್ತಬ್ಧಚಿತ್ರ ಉಪಸಮಿತಿಯ ರಾಜ್ಯಮಟ್ಟದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ 35 ಸ್ತಬ್ಧ ಚಿತ್ರಗಳನ್ನು ಅಂತಿಮಗೊಳಿಸಲಾಗಿದ್ದು, 30 ಜಿಲ್ಲಾ ಪಂಚಾಯಿತಿಗಳಿಂದ ತಲಾ ಒಂದೊಂದು ಸ್ತಬ್ಧ ಚಿತ್ರಗಳು, ರಾಜ್ಯವಲಯದಿಂದ ಕೌಶಲ್ಯ ಕರ್ನಾಟಕ ಪ್ರವಾಸೋದ್ಯಮ, ಕನ್ನಡ ಸಂಸ್ಕøತಿ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತಲಾ ಒಂದೊಂದು ಸ್ತಬ್ಧ ಚಿತ್ರ ನಿರ್ಮಿಸಲು ವಿಷಯ ಅಂತಿಮತೊಳಿಸಲಾಗಿದೆ ಎಂದರು.

ದಸರೆಯಲ್ಲಿ ಭಾಗವಹಿಸುವ ಸ್ತಬ್ಧ ಚಿತ್ರಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿ , ಪರಿಸರ, ಅರಣ್ಯೀಕರಣ, ಅಂತರ್ಜಲ, ಪರಿಸರ ಸ್ನೇಹಿ ಸ್ತಬ್ಧ ಚಿತ್ರಗಳಾಗಿದ್ದು ಪ್ರವಾಸೋದ್ಯಮ ಹಾಗೂ ಸರ್ಕಾರದ ಕಾರ್ಯಕ್ರಮಗಳು ವಿಶೇಷ ಸಾಧನೆ ಕುರಿತ ಸ್ತಬ್ಧಚಿತ್ರಗಳು, ಸಂವಿಧಾನ, ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಕುರಿತ ಸ್ತಬ್ಧಚಿತ್ರಗಳು ಮೂಡಿಬರಲಿವೆ ಎಂದರು.

ದಿನಾಂಕ 11-09-2017 ರಿಂದ ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಸ್ತಬ್ಧಚಿತ್ರಗಳ ಕೆಲಸ ಪ್ರಾರಂಭಿಸಲಾಗುತ್ತಿದೆ.

25-09-2017ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ತಬ್ಧಚಿತ್ರಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಗುವುದು. 28-09-2017ರಂದು ಸ್ತಬ್ಧಚಿತ್ರಗಳ ಪೂರ್ವ ಮೆರವಣಿಗೆ ನಡೆಸಲಾಗುವುದು. 30-09-2017ರಂದು ನಡೆಯುವ ವಿಜಯದಶಮಿ, ಜಂಬೂಸವಾರಿ ಮೆರವಣಿಗೆಯಲ್ಲಿ ತಯಾರಿಸಿರುವ ಎಲ್ಲಾ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು.

ಅಗ್ನಿ ದುರಂತಗಳು ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಐದು ಸ್ಥಬ್ಧಚಿತ್ರಗಳ ಹಿಂದೆ ಒಂದೊಂದು ಅಗ್ನಿಶಾಮಕ ವಾಹನವನ್ನು ನಿಯೋಜಿಸಲಾಗುವುದು. ಈ ಹಿಂದಿನ ಸಾಲುಗಳಲ್ಲಿ ಉಂಟಾಗಿರುವ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಸ್ತಬ್ಧ ಚಿತ್ರ ಉಪಸಮಿತಿಯ ಕಾರ್ಯಾಧ್ಯಕ್ಷರಾದ ರಾಮಕೃಷ್ಣೇಗೌಡ, ಕಾರ್ಯದರ್ಶಿ ಹಾಗೂ ಜಿ.ಪಂ. ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕ ಮಹೇಶ್, ಶ್ರೀನಿವಾಸ್ ಹಾಜರಿದ್ದರು.

Leave a Reply

Your email address will not be published. Required fields are marked *