ಬೈಲುಕುಪ್ಪೆ ಸ್ವರ್ಣದೇಗುಲ | Mysuru Dasara 2019

ಮೈಸೂರು ಜಿಲ್ಲೆಯಿಂದ ಸುಮಾರು 88ಕಿ.ಮೀ. ದೂರದಲ್ಲಿರುವ ಬೈಲುಕುಪ್ಪೆ ಪ್ರವಾಸಿತಾಣವಾಗಿ ಖ್ಯಾತಿ ಪಡೆಯಲು ಇಲ್ಲಿ ನಿರ್ಮಿಸಲ್ಪಟ್ಟಿರುವ ಸ್ವರ್ಣದೇಗುಲ(ಗೋಲ್ಡನ್ ಟೆಂಪಲ್)ವೇ ಮುಖ್ಯ ಕಾರಣವಾಗಿದೆ. ಟಿಬೆಟ್ ನಿರಾಶ್ರಿತರ ಶಿಬಿರವು ಸ್ವರ್ಣ ದೇಗುಲ ಸೇರಿದಂತೆ ಸುಮಾರು ಹದಿನೇಳಕ್ಕೂ ಹೆಚ್ಚು ವಿವಿಧ ದೇಗುಲಗಳು, ಧ್ಯಾನಕೇಂದ್ರ, ಸನ್ಯಾಸಿನಿಯರ ಬೌದ್ಧವಿಹಾರ, ಬೌದ್ಧ ಭಿಕ್ಷುಗಳ ಮಹಾವಿದ್ಯಾಲಯ, ಆಸ್ಪತ್ರೆ, ಬೌದ್ಧವಿಹಾರದ ಸುತ್ತ 1300 ಪ್ರಾರ್ಥನಾ ಚಕ್ರಗಳು, ಎಂಟು ಸ್ಥೂಪಗಳು ಹೀಗೆ ತನ್ನದೇ ವೈಶಿಷ್ಟ್ಯತೆಯಿಂದ ಪ್ರವಾಸಿಗರನ್ನು ಸೆಳೆಯುತ್ತಿವೆ.
ಈ ಸ್ವರ್ಣ ದೇಗುಲ ಟಿಬೆಟ್ ದೇಶದ ಸಂಪ್ರದಾಯಗಳಿಗೆ ತಕ್ಕಂತೆ ನಿರ್ಮಾಣಗೊಂಡಿದೆ. ಪರಮ ಪೂಜ್ಯ ಪನೋರ್ ರಿನ್ ಪೋಚೆಯವರು ಇದನ್ನು 1995ರಲ್ಲಿ ಆರಂಭಿಸಿ 1999ರಲ್ಲಿ ಪೂರ್ಣಗೊಳಿಸಿದರು. ನಾಲ್ಕು ವರ್ಷಗಳ ಸತತ ಪರಿಶ್ರಮದಿಂದ ಆಕರ್ಷಕ, ವೈಶಿಷ್ಟ್ಯಪೂರ್ಣವಾಗಿಯೂ ನಿರ್ಮಿಸುವಲ್ಲಿ ಪೆನೋರ್ ರಿನ್ ಪೋಚೆಯವರ ಸಾಧನೆ ಸ್ಮರಣೀಯ.

ವಿಳಾಸ:

ಗೋಲ್ಡನ್ ಟೆಂಪಲ್, ಬೈಲಾಕುಪ್ಪೆ, ಕರ್ನಾಟಕ