ಹೊಯ್ಸಳೇಶ್ವರ ದೇವಸ್ಥಾನ,ಹಳೇಬೀಡು | Mysuru Dasara 2019

ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ. ಹೊಯ್ಸಳ ಸಾಮ್ರಾಜ್ಯದ ರಾಜಧಾನಿ ದ್ವಾರಸಮುದ್ರ (ಇಂದಿನ ಹಳೇಬೀಡು), ಹಾಸನ ಜಿಲ್ಲೆಯಲ್ಲಿದೆ. ಜಾನಪದ ನಂಬಿಕೆಯಂತೆ, ಹೊಯ್ಸಳ ಎಂಬ ಹೆಸರು ಈ ವಂಶದ ಸಂಸ್ಥಾಪಕ ಸಳನಿಂದ ವ್ಯುತ್ಪತ್ತಿಯಾದದ್ದು. ಚಾರಿತ್ರಿಕವಾಗಿ ಈ ಸಂಸ್ಥಾಪಕನ ಹೆಸರು ನೃಪಕಾಮ ಎಂದು ಊಹಿಸಲಾಗಿದೆ.

ಹಳೇಬೀಡು ಶಿಲ್ಪಕಲೆಯ ನೆಲೆವೀಡು. ಹಳೆಯಬೀಡಿನ ಮೊದಲ ಹೆಸರು ದೋರಸಮುದ್ರ. ಕ್ರಿ.ಶ. 950ಕ್ಕೆ ಮೊದಲೇ ರಾಷ್ಟ್ರಕೂಟರ ದೊರೆ ಭಾವದೋರ ಎಂಬಾತ ಇಲ್ಲಿ ಕೆರೆಯನ್ನು ನಿರ್ಮಿಸಿ ರಾಜ್ಯಭಾರ ಮಾಡಿದ್ದರಿಂದ ಇದಕ್ಕೆ ದೋರಸಮುದ್ರ ಎಂದು ಹೆಸರು ಬಂದಿತ್ತು ಎನ್ನುತ್ತಾರೆ.ಹೆಸರು ಹಳೆಯ ಬೀಡಾದರೂ, ಇಲ್ಲಿನ ಶಿಲ್ಪಕಲೆಗಳು ನವನವೀನ, ನಿತ್ಯನೂತನ. ಹಳೆಯ ಬೀಡಿನಲ್ಲಿ ಹಲವಾರು ಅತ್ಯಂತ ಸುಂದರ ದೇಗುಲಯಗಳಿವೆಯಾದರೂ, ಅಲ್ಲಾಉದ್ದೀನನ ದಂಡನಾಯಕ ಮಲ್ಲಿಕ್ ಕಾಫೂರ್ ಸೇರಿದಂತೆ ಹಲವು ಮುಸಲ್ಮಾನ ದೊರೆಗಳ ದಾಳಿಯ ಬಳಿಕ ಈ ಹೊತ್ತು, ಸುಸ್ಥಿತಿಯಲ್ಲಿ ಉಳಿದಿರುವುದು ಹೊಯ್ಸಳೇಶ್ವರ ದೇವಾಲಯ ಮಾತ್ರ.. ಬೆಟ್ಟಗುಡ್ಡಗಳಿಂದಾವರಿಸಿ, ವಿಶಾಲ ಕಣಿವೆಗಳಿದ್ದ ಈ ರಮ್ಯತಾಣ ಮುಮ್ಮಡಿ ಬಲ್ಲಾಳನ ಕಾಲದಲ್ಲಿ ವಿಸ್ತಾರಗೊಂಡಿತು

ವಿಳಾಸ:

ಹಲೆಬೀಡು, ಕರ್ನಾಟಕ 573121