ಗಣ್ಯರೊಂದಿಗೆ ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ | Mysuru Dasara 2019

ಗಣ್ಯರೊಂದಿಗೆ ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ

ಮಾನ್ಯ ಲೋಕೋಪಯೋಗಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಇಂದು ಅರಮನೆ ಆವರಣದಲ್ಲಿ ದಸರಾ ಗಜಪಡೆಯೊಂದಿಗೆ ಆಗಮಿಸಿರುವ ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಹಾರ ಕೂಟ ಏರ್ಪಡಿಸಿ, ಸ್ವತಃ ಬಡಿಸಿದರು.

ನಂತರ ಮಾತನಾಡಿದ ಅವರು ಪ್ರತಿವರ್ಷದಂತೆ ಈ ಬಾರಿಯೂ ಕೂಡ ಕಾವಾಡಿಗಳಿಗೆ ಮಾವುತರ ಕುಟುಂಬಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಎಲ್ಲಾರೂ ಸಹ ಓಳಿಗೆ ಉಪಹಾರ ಸೇವಿಸಿದ್ದಾರೆ ಎಂದರು.

ಇದೇ ವೇಳೆ ಜಿಲ್ಲಾಧಿಕಾರಿ ಡಿ.ರಂದೀಪ್, ಶಾಸಕ ಎಂ.ಕೆ.ಸೋಮಶೇಖರ್, ವಸ್ತುಪ್ರದರ್ಶನ ಪ್ರಾಧಿಕಾರದ ಅದ್ಯಕ್ಷ ಸಿದ್ದರಾಜು,ಮೈಲಾಕ್ ಅದ್ಯಕ್ಷ ವೆಂಕಟೇಶ್, ಮೇಯರ್ ಎಂ.ಜೆ.ರವಿಕುಮಾರ್, ಅರಣ್ಯಾಧಿಕಾರಿ ಏಡುಕುಂಡಲು ಜೊತೆಗಿದ್ದರು.