ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ | Mysuru Dasara 2019

ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019 ವನ್ನು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 7 ರವರೆಗೆ ಕಾಡಾ ಮೈದಾನದಲ್ಲಿ ಏರ್ಪಡಿಸಲಾಗಿದೆ.

ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.2,000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ ಸೈಟ್‍ಗಳಲ್ಲಿ www.kannadapustakapradhikara.com ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್ 21 ರಂದು ಸಂಜೆ 5ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇಲ್ಲಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ಮೂಲಕ ಸಲ್ಲಿಸುವಂತೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516 / 22107704 ಅನ್ನು ಸಂಪರ್ಕಿಸುವುದು.

ಸ್ಥಳ :

ಕಾಡಾ ಮೈದಾನ

ಗೂಗಲ್ ಮ್ಯಾಪ್

ದಿನಾಂಕ :

ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 7 ರವರೆಗೆ

ಗ್ಯಾಲರಿ