ಮೈಸೂರು ದಸರಾ ರಸಪ್ರಶ್ನೆ | Mysuru Dasara 2019

ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ರಸಪ್ರಶ್ನೆ ಕಾರ್ಯಕ್ರಮ

ಪ್ರವೇಶ: 8,9,10, ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು
ನೋಂದಣಿಗಾಗಿ, ನಿಮ್ಮ ಶಾಲೆ ಅಥವಾ ಕಾಲೇಜು ಮುಖ್ಯಸ್ಥರನ್ನು ಸಂಪರ್ಕಿಸಿ

ಮೈಸೂರು ದಸರಾ ಮಹೋತ್ಸವ 2019 ಮತ್ತು ದಿನಾಂಕ: 27.09.2019 ರಂದು ನಡೆಯಲಿರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ “ದಸರಾ ರಸ ಪ್ರಶ್ನೆ” ಕಾರ್ಯಕ್ರಮವನ್ನು ದಸರಾ ಕುಸ್ತಿ, ದಸರಾ ಕ್ರೀಡೆಗಳು ಮಾದರಿಯಲ್ಲಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ,ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ನೂತನ ಸಭಾಭವನದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಹಾಗೂ ಸದರಿ ಕಾರ್ಯಕ್ರಮವನ್ನು ಖ್ಯಾತ ಚಿತ್ರ ನಟರಾದ ಶ್ರೀ ರಮೇಶ್ ಅರವಿಂದ್‌ರವರು ಮೈಸೂರು ದಸರಾ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಕರ್ನಾಟಕ ರಾಜ್ಯದ ಭವ್ಯ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ “ದಸರಾ ಕ್ವಿಜ್’ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ದಿನಾಂಕ:27.09.2019 ರಂದು ಬೆಳಿಗ್ಗೆ 09.45 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, 8,9,10 ಹಾಗೂ ಪ್ರಥಮ -ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವುದರ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗುವುದು. 8,9,10 ತರಗತಿ ವಿದ್ಯಾರ್ಥಿಗಳು ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಮತ್ತು ಪ್ರಥಮ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಕ ನೋಂದಣಿ ಮಾಡಿಕೊಳ್ಳಲು ಕೋರಿದೆ. ನೋಂದಣಿ ಅರ್ಜಿಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಯ ಮೂಲಕ ಪಡೆಯಲು ಕೋರಿದೆ. ಆಸಕ್ತ ವಿದ್ಯಾರ್ಥಿಗಳ,ಸಂಘ-ಸಂಸ್ಥೆಗಳು, ಸಾರ್ವಜನಿಕ ಪ್ರೇಕ್ಷಕರಾಗಿ ದಸರಾ ಕ್ವಿಜ್ ನಲ್ಲಿ ಭಾಗವಹಿಸಲು ಕೋರಿದೆ.

ಸ್ಥಳ :

ಘಟಿಕೋತ್ಸವ ಭವನ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು

ಸಮಯ :

ಬೆಳಿಗ್ಗೆ 9:45 ರಿಂದ ಮಧ್ಯಾಹ್ನ 3:00 ರವರೆಗೆ

ದಿನಾಂಕ :

27 ಸೆಪ್ಟೆಂಬರ್ 2019

ಗ್ಯಾಲರಿ :